Jeremiah 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
Kannada Bible (KNCL) BSI 2016
ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.