Jeremiah 18:17 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.
Kannada Bible (KNCL) BSI 2016
ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”