Jeremiah 18:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಘಲೆಯಲ್ಲಿ ಸಿಕ್ಕಿಸಙೇಕೆಂದು ಪ್ರಯತಐ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಘಲೆಗಳನ್ನು ಅವರು ಹಾಕಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
Kannada Bible (KNCL) BSI 2016
ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.