Jeremiah 18:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಘಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
Kannada BSI Bible 2016
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.
Kannada Bible (KNCL) BSI 2016
“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.