Jeremiah 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
Kannada BSI Bible 2016
ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು: “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,