Jeremiah 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ ‘ಹೊಲಸಾಗುವವು.’ ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
Kannada BSI Bible 2016
ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.
Kannada Bible (KNCL) BSI 2016
ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”