Jeremiah 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಘಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.
Kannada BSI Bible 2016
ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.
Kannada Bible (KNCL) BSI 2016
“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”