Jeremiah 19:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಘಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ
Kannada Bible (KNCL) BSI 2016
ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,