Jeremiah 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Kannada BSI Bible 2016
ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;
Kannada Bible (KNCL) BSI 2016
ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.