Jeremiah 19:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ, ಬೆನ್‌ಹಿನೊಐಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು ‘ತೋಫೆತ್’ ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು ‘ಕೊಲೆಯ ಕಣಿವೆ’ ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನೆಐಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.
Kannada BSI Bible 2016
ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು;
Kannada Bible (KNCL) BSI 2016
ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.