Jeremiah 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶ ಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು ಎಂದು ಯೆಹೋವನು ನುಡಿಯುತ್ತಾನೆ.
Kannada Bible (KNCL) BSI 2016
ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ.