Jeremiah 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
Kannada BSI Bible 2016
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
Kannada Bible (KNCL) BSI 2016
“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.