Jeremiah 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
Kannada BSI Bible 2016
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.
Kannada Bible (KNCL) BSI 2016
ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.