Jeremiah 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
Kannada BSI Bible 2016
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.
Kannada Bible (KNCL) BSI 2016
ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?