Jeremiah 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
Kannada BSI Bible 2016
ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?
Kannada Bible (KNCL) BSI 2016
ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?