Jeremiah 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದವೇ, ಘಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
Kannada BSI Bible 2016
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.
Kannada Bible (KNCL) BSI 2016
“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.