Jeremiah 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಘಳ್ಳಿಯಾದದ್ದು ಹೇಗೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
Kannada BSI Bible 2016
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?
Kannada Bible (KNCL) BSI 2016
ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?