Jeremiah 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಘಲ್ಲೆ” ಅನ್ನುತ್ತಾನೆ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
Kannada BSI Bible 2016
ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.