Jeremiah 2:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
Kannada BSI Bible 2016
ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.
Kannada Bible (KNCL) BSI 2016
ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.