Jeremiah 2:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಘಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
Kannada BSI Bible 2016
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.
Kannada Bible (KNCL) BSI 2016
ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.