Jeremiah 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತಿಐಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.”‘ ಇದು ಯೆಹೋವನ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”
Kannada BSI Bible 2016
ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.