Jeremiah 2:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಘಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
Kannada BSI Bible 2016
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.
Kannada Bible (KNCL) BSI 2016
ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.