Jeremiah 2:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸಬತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
Kannada BSI Bible 2016
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.
Kannada Bible (KNCL) BSI 2016
ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ: ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?