Jeremiah 2:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಘಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
Kannada BSI Bible 2016
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].
Kannada Bible (KNCL) BSI 2016
ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.