Jeremiah 2:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಊಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
Kannada BSI Bible 2016
ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.
Kannada Bible (KNCL) BSI 2016
“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.