Jeremiah 2:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ವಿಚಾರಗಳನ್ನು ಘದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
Kannada BSI Bible 2016
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
Kannada Bible (KNCL) BSI 2016
ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.