Jeremiah 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಘಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಊಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
Kannada BSI Bible 2016
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.
Kannada Bible (KNCL) BSI 2016
ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.