Jeremiah 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನು ನನೊಐಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
Kannada BSI Bible 2016
ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.
Kannada Bible (KNCL) BSI 2016
ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.