Jeremiah 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಘಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
Kannada BSI Bible 2016
ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
Kannada Bible (KNCL) BSI 2016
ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.