Jeremiah 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸೆಐಹೀತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
Kannada BSI Bible 2016
ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
Kannada Bible (KNCL) BSI 2016
ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.