Jeremiah 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಘಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
Kannada BSI Bible 2016
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
Kannada Bible (KNCL) BSI 2016
ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.