Jeremiah 20:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಘಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
Kannada BSI Bible 2016
ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.
Kannada Bible (KNCL) BSI 2016
ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.