Jeremiah 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೆ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನೆಐನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜಾಬಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತಐ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನೊಐಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
Kannada BSI Bible 2016
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.
Kannada Bible (KNCL) BSI 2016
‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.