Jeremiah 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಙೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.”‘ ಇದು ಯೆಹೋವನಿಂದ ಘಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”
Kannada BSI Bible 2016
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’