Jeremiah 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ. ಆದರೆ ಯೆಹೋವನ ಸಂದೇಶವನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,
Kannada BSI Bible 2016
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ,
Kannada Bible (KNCL) BSI 2016
ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.