Jeremiah 21:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಘಹುದು. ನೆಘೂಕದೆಐಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಘಹುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
Kannada BSI Bible 2016
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
Kannada Bible (KNCL) BSI 2016
ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.