Jeremiah 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಘಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಘಹಳ ಕೋಪ ಘಂದಿದೆ; ಅದಕ್ಕಾಗಿ ನನ್ನ ಘಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಘಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಘಂದಿದೆ ಎಂಬುದನ್ನು ತೋರಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.
Kannada BSI Bible 2016
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.
Kannada Bible (KNCL) BSI 2016
ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.