Jeremiah 21:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.
Kannada BSI Bible 2016
ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು.
Kannada Bible (KNCL) BSI 2016
ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.