Jeremiah 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಊಪತಿಗಳನ್ನು ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಘೂಕದೆಐಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಘೂಕದೆಐಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಘಲಿಯಾಗುವರು. ನೆಘೂಕದೆಐಚ್ಚರನು ಸಬಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.
Kannada BSI Bible 2016
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.
Kannada Bible (KNCL) BSI 2016
ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’