Jeremiah 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Kannada BSI Bible 2016
ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಈ ಜನರಿಗೆ ಹೀಗೆ ಹೇಳು ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಜೀವಿಸುವ ಮಾರ್ಗವನ್ನೂ ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Kannada Bible (KNCL) BSI 2016
“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.