Jeremiah 22:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಊಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಊಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
Kannada BSI Bible 2016
ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವನಿಗಾಗಿ ಅಳಬೇಡಿರಿ, ಬಡುಕೊಳ್ಳಬೇಡಿರಿ; ಸೆರೆಯಾದವನಿಗೇ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂವಿುಯನ್ನು ನೋಡನು.
Kannada Bible (KNCL) BSI 2016
“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.