Jeremiah 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
Kannada BSI Bible 2016
ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು;
Kannada Bible (KNCL) BSI 2016
ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.