Jeremiah 22:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೆ ಕೊಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
Kannada BSI Bible 2016
ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -
Kannada Bible (KNCL) BSI 2016
“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!