Jeremiah 22:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾಕೀಮನು, “ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ” ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಘಣ್ಣವನ್ನು ಬಳಿಯುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
Kannada BSI Bible 2016
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
Kannada Bible (KNCL) BSI 2016
‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ!