Jeremiah 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಘಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
Kannada BSI Bible 2016
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;
Kannada Bible (KNCL) BSI 2016
ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?