Jeremiah 22:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, “ದೇವರನ್ನು ಅರಿತುಕೊಳ್ಳುವುದು ಎಂದರೇನು?” ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಙೇಕಾದದ್ದು ಅದೇ.” ಇದು ಯೆಹೋವನಿಂದ ಘಂದ ಸಂದೇಶ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನಿಗೆ ನೆಮ್ಮದಿಯಾಗಿತ್ತು. ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವದೆಂದರೆ ಇದೇ ಎಂಬದು ಯೆಹೋವನ ನುಡಿ.
Kannada Bible (KNCL) BSI 2016
ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.