Jeremiah 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಊಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
Kannada BSI Bible 2016
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.
Kannada Bible (KNCL) BSI 2016
ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”