Jeremiah 22:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
Kannada BSI Bible 2016
ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
Kannada Bible (KNCL) BSI 2016
ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.