Jeremiah 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಯೆಹೂದದ ರಾಜನೇ, ಯೆಹೋವನಿಂದ ಘಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಊಕಾರಿಗಳು ಚೆನ್ನಾಗಿ ಕೇಳಙೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
Kannada BSI Bible 2016
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಸಿಂಹಾಸನಾರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
Kannada Bible (KNCL) BSI 2016
‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.