Jeremiah 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದವೇ, ಲೆಘನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
Kannada BSI Bible 2016
ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ.
Kannada Bible (KNCL) BSI 2016
“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು! ಬಾಷಾನಿನಲ್ಲಿ ಮೊರೆಯಿಡು! ಅಬಾರೀಮಿನಲ್ಲಿ ಕಿರುಚಾಡು! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.